ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಎಂಡೋಸಲ್ಫಾನ್ ಪೀಡಿತ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸಾನಿಧ್ಯ ಸ್ಕಿಲ್ ತರಬೇತಿ ಕೇಂದ್ರದಲ್ಲಿ ಅದ್ದೂರಿಯಾಗಿ ಓಣಂ ಹಬ್ಬವನ್ನು ಆಚರಿಸಲಾಯಿತು.


ಗಂಡಿಬಾಗಿಲು ಸಿಯೋನ್ ಆಶ್ರಮದ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ಯು.ಸಿ. ಪೌಲೋಸ್ ಅವರು ದೀಪ ಬೆಳಗಿಸಿ, ಪೂಕಳಂ ಉದ್ಘಾಟಿಸುವ ಮೂಲಕ ಓಣಂ ಆಚರಣೆಗೆ ಚಾಲನೆ ನೀಡಿದರು. ಬಳಿಕ ಅವರು ಓಣಂ ಸಂದೇಶ ನೀಡಿದರು.


ಈ ಸಂದರ್ಭದಲ್ಲಿ ಎಕ್ಸಲೆನ್ಸ್ ಪ್ರಶಸ್ತಿ ಪುರಸ್ಕೃತ ಡಾ. ಎಂ.ಎಂ. ದಯಾಕರ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಪ್ರಾಯೋಜಕರಾದ ಕುಚುಮೋನು, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ವಿನಯಾ ಹಾಗೂ ಶ್ರೀ ಗಣೇಶ್ ಸೇವಾ ಟ್ರಸ್ಟ್ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.


ಕೇಂದ್ರದ ಸಲಹಾ ಸಮಿತಿ ಸದಸ್ಯ ರೋಶನ್ ಸಿಕ್ವೇರಾ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾನಿಧ್ಯ ಕೇಂದ್ರದ ವಿಶೇಷ ಮಕ್ಕಳು ಹಾಗೂ ಶಿಕ್ಷಕರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.


ನಂತರ ಶ್ರೀ ಗಣೇಶ್ ಸೇವಾ ಟ್ರಸ್ಟ್ನ ಎಲ್ಲಾ ಪದಾಧಿಕಾರಿಗಳು ಸಿಯೋನ್ ಆಶ್ರಮಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿದ್ದ ಓಣಂ ಆಚರಣೆಯಲ್ಲಿ ಪಾಲ್ಗೊಂಡರು. ಬಳಿಕ ಓಣಂ ಸದ್ಯದಲ್ಲಿ ಭಾಗವಹಿಸಿ ಸಾಂಪ್ರದಾಯಿಕ ಭೋಜನ ಸವಿದರು.

