ದೇರಳಕಟ್ಟೆ : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ದೇರಳಕಟ್ಟೆ ಬ್ಲಾಕ್ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು. ದಿನಾಂಕ 28/08/2026ರಂದು ದೇರಳಕಟ್ಟೆಯಲ್ಲಿ ನಡೆದ ಸಭೆಯಲ್ಲಿ SDTU ಜಿಲ್ಲಾಧ್ಯಕ್ಷರಾದ ರಹಿಮಾನ್ ಬೋಳಿಯಾರ್ ಅವರ ನೇತೃತ್ವದಲ್ಲಿ ನೂತನ ಬ್ಲಾಕ್ ಸಮಿತಿಯನ್ನು ರಚಿಸಲಾಯಿತು.
ನೂತನ ಸಮಿತಿಯ ಅಧ್ಯಕ್ಷರಾಗಿ ಉಸ್ಮಾನ್ ಮಲಾರ್, ಉಪಾಧ್ಯಕ್ಷರಾಗಿ ಮೊಹಮ್ಮದ್ ಅನ್ಸಾರ್ ದೇರಳಕಟ್ಟೆ, ಕಾರ್ಯದರ್ಶಿಯಾಗಿ ಮಹಮ್ಮದ್ ಅಮೀರ್ ಅಡ್ಕರಪಡ್ಪು, ಜೊತೆ ಕಾರ್ಯದರ್ಶಿಯಾಗಿ ಮಹಮ್ಮದ್ ಸವಾದ್ ಹಾಗೂ ಕೋಶಾಧಿಕಾರಿಯಾಗಿ ಮಹಮ್ಮದ್ Steps ಅಡ್ಕರಪಡ್ಪು ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ಮಹಮ್ಮದ್ ಮುಸ್ತಫಾ ,ನಝೀರ್ ಅಹ್ಮದ್ ಮೊಹಮ್ಮದ್ ಸಫ್ವಾನ್ ಅವರು ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ SDTU ಜಿಲ್ಲಾಧ್ಯಕ್ಷರಾದ ರಹಿಮಾನ್ ಬೋಳಿಯಾರ್, ಕಾರ್ಮಿಕರ ಹಕ್ಕುಗಳ ರಕ್ಷಣೆ, ಕಾರ್ಮಿಕರಿಗೆ ನ್ಯಾಯಯುತ ವೇತನ ಹಾಗೂ ಸಾಮಾಜಿಕ ಭದ್ರತೆ ಸೇರಿದಂತೆ ಕಾರ್ಮಿಕರ ವಿವಿಧ ಸಮಸ್ಯೆಗಳಿಗೆ ಸಂಘಟಿತವಾಗಿ ಧ್ವನಿ ಎತ್ತುವ ಅಗತ್ಯವನ್ನು ಒತ್ತಿಹೇಳಿದರು. ದೇರಳಕಟ್ಟೆ ಬ್ಲಾಕ್ನಲ್ಲಿ ಕಾರ್ಮಿಕರನ್ನು ಸಂಘಟಿಸುವ ಮೂಲಕ SDTU ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನೂತನ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದರು.

