ವೇಣೂರು : ವೇಣೂರು ಪೊಲೀಸ್ ಠಾಣಾ ಅಕ್ರ 16/2012, ಕಲಂ:395 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ, ಸುಮಾರು 13 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟು ಆಸಾಮಿ ಶ್ರೀನಿವಾಸ್ ಕೆ @ ಶಿನಪ್ಪ @ ಶೀನ (43) ಎಂಬಾತನನ್ನು, ವೇಣೂರು ಠಾಣಾ ಸಿಬ್ಬಂದಿಗಳಾದ ಎ ಎಸ್ಐ ಬೆನ್ನಿಚನ್, ಹೆಚ್ ಸಿ ಕೃಷ್ಣ, ಸಿಪಿಸಿ ಬಸವರಾಜ್ ಎಸ್ ಪಿ ಮತ್ತು ಸಿಪಿಸಿ ಮೋಹನ್ ಕುಮಾರ್ ಎಂಬವರುಗಳ ತಂಡ ವಿಜಯನಗರ ಜಿಲ್ಲೆಯ ಹರಪನಳ್ಳಿ ಕೊರಚರಟ್ಟಿ ಎಂಬಲ್ಲಿಂದ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಸದ್ರಿ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

