ಮಂಗಳೂರು : ಕಳೆದ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ
ಹಿಲೇರಿ ನಗರದ ಮುಕ್ಕಚೇರಿ ಉಳ್ಳಾಲ ನಿವಾಸಿ ಮುವಾಚ್ (45 ವರ್ಷ) ಬಂಧಿತ ಆರೋಪಿ, ಸದ್ರಿ ಆರೋಪಿತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣಾ ಮೊ.ನಂ 166/2006 ಕಲಂ 379 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಕಾರಣ ಮಾನ್ಯ ನ್ಯಾಯಾಲಯವು ಎಲ್ ಪಿ ಸಿ ವಾರೆಂಟ್ ಹೊರಡಿಸಿರುತ್ತದೆ.
ಆರೋಪಿತನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ದಿನಾಂಕ 28-08-2026 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

