ಮಂಗಳೂರು: ಕರ್ನಾಟಕ ಸರ್ಕಾರದ ಸಿಡಾಕ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್, ಮಂಗಳೂರು ಹಾಗೂ ಎಂಆರ್ಪಿಎಲ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಸಮಾರೋಪ ಸಮಾರಂಭ ನಡೆಯಿತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ಮೋಹನಂಗಯ್ಯ ಸ್ವಾಮಿ ನೇತೃತ್ವದಲ್ಲಿ ನಗರದಲ್ಲಿರುವ ಟ್ರಸ್ಟ್ನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮುದಾಯದ ಯುವಕರು ಹಾಗೂ ಉದ್ಯಮಿಗಳಿಗೆ ಉದ್ಯಮಶೀಲತೆ, ಸ್ವಉದ್ಯೋಗ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ತರಬೇತಿ ನೀಡಲಾಯಿತು. MSSEWA ಅಧ್ಯಕ್ಷರ ಯುವರಾಜ್ ಎಂ.ಕೆ. ತರಬೇತಿಯ ಪ್ರಮಾಣಪತ್ರ ನೀಡಿದರು.

