ಮಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮದ ಸವಿನೆನಪಿಗಾಗಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಭಾನುವಾರ ರಾತ್ರಿ ಗುಲಾಬಿ ಬಣ್ಣ(ಪಿಂಕ್ ಲೈಟ್)ದ ಬೆಳಕಿನಲ್ಲಿ ಕಂಗೊಳಿಸಿತು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ 2,000/- ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಇದೇ ಆ.30ಕ್ಕೆ ಮೂರು ವರ್ಷಗಳನ್ನು ಪೂರೈಸಲಿದೆ.

ಸರ್ಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷಗಳನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ ಬಣ್ಣದ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ. ಇದುವರೆಗೂ ಗೃಹಲಕ್ಷ್ಮಿ ಯೋಜನೆ ಅಡಿ 1.20ಕೋಟಿ ಫಲನುಭವಿಗಳ ಖಾತೆಗೆ 76500ಕೋಟಿಗೂ ಹೆಚ್ಚು ಹಣ ಪಾವತಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ವಿದ್ಯುದ್ದೀಪಾಲಂಕಾರ ಆಯೋಜಿಸಿತ್ತು.


