ಮಂಗಳೂರು : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್)ನ 14ನೇ ರಾಜ್ಯಮಟ್ಟದ ಸಾಹಿತ್ಯೋತ್ಸವ ಸೆಪ್ಟೆಂಬರ್ 4, 5 ಮತ್ತು 6 ರಂದು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಮದರ್ ಕ್ಯಾಂಪಸ್ನಲ್ಲಿ ನಡೆಯಲಿದೆ ಎಂದು ಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದ ಅವರು ಸೆ.4 ರಂದು ಸಂಜೆ 5 ಗಂಟೆಗೆ ಧ್ವಜಾರೋಹಣ ನಡೆಯಲಿದ್ದು, ಬಳಿಕ ಗ್ರ್ಯಾಂಡ್ ಮೌಲಿದ್ ಮಜ್ಲಿಸ್ ಆಯೋಜಿಸಲಾಗಿದೆ. ಸೆ.5 ಮತ್ತು 6 ರಂದು ನಡೆಯುವ ಸಾಹಿತ್ಯೋತ್ಸವದಲ್ಲಿ ರಾಜ್ಯದ 27 ಜಿಲ್ಲೆಗಳ ಸುಮಾರು 2,000 ಆಯ್ದ ಪ್ರತಿಭೆಗಳು ಭಾಗವಹಿಸಲಿದ್ದು, 9 ವೇದಿಕೆಗಳಲ್ಲಿ 150ಕ್ಕೂ ಹೆಚ್ಚು ವೈವಿಧ್ಯಮಯ ಸ್ಪರ್ಧೆಗಳು ನಡೆಯಲಿವೆ.
ಸೆ.5 ರಂದು ಬೆಳಗ್ಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತ ನಾಡೋಜ ಕುಂ.ವೀರಭದ್ರಪ್ಪ ಸಾಹಿತ್ಯೋತ್ಸವ ಉದ್ಘಾಟಿಸಲಿದ್ದಾರೆ. ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸೆ.6 ರಂದು ಸಂಜೆ ಸಾಹಿತ್ಯೋತ್ಸವ ಸಮಾರೋಪಗೊಳ್ಳಲಿದೆ.
ಪತ್ರಿಕಾಗೋಷ್ಠಿಯಲ್ಲಿ ರಶೀದ್ ಮಡಂತ್ಯಾರು, ತೌಸೀಫ್ ಅಸ್ಅದಿ, ಹಮೀದ್ ತಲಪಾಡಿ, ಅಜ್ಮಲ್ ಕಾವೂರು ಮತ್ತಿತರರು ಉಪಸ್ಥಿತರಿದ್ದರು.

