ಮಂಗಳೂರು: ಶಕ್ತಿನಗರದ ಸಾನಿಧ್ಯ ಭಿನ್ನ ಸಾಮರ್ಥ್ಯ ವಸತಿ ಶಾಲೆ ಹಾಗೂ ತರಬೇತಿ ಕೇಂದ್ರದ ವತಿಯಿಂದ ಶಿಕ್ಷಕರ ದಿನಾಚರಣೆ ಸೆ.7 ರಂದು ಮಧ್ಯಾಹ್ನ 2 ಗಂಟೆಗೆ ಶಾಲಾ ಆವರಣದಲ್ಲಿ ನಡೆಯಲಿದೆ.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನೂತನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಾನಿಧ್ಯ ಸಂಸ್ಥೆಯ ಟ್ರಸ್ಟಿಗಳು, ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿ ಹಾಗೂ ವಿಶೇಷ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕುರಿತು ಸಾನಿಧ್ಯ ಭಿನ್ನ ಸಾಮರ್ಥ್ಯ ವಸತಿ ಶಾಲೆಯ ಆಡಳಿತಾಧಿಕಾರಿ ಡಾ.ವಸಂತ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


