ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ.
2002ರ ಮತದಾರರ ಪಟ್ಟಿಯಲ್ಲಿ ಹರೇಕಳ ಹಾಜಬ್ಬರ ಹೆಸರನ್ನು ಕೇವಲ ‘ಹಾಜಬ್ಬ’ ಎಂದು ನಮೂದಿಸಲಾಗಿತ್ತು. ಆದರೆ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಪಾಸ್ಪೋರ್ಟ್ ಹಾಗೂ ಮತದಾರರ ಗುರುತಿನ ಚೀಟಿ ಸೇರಿದಂತೆ ಅವರ ಇತರ ಅಧಿಕೃತ ದಾಖಲೆಗಳಲ್ಲಿ ‘ಹರೇಕಳ ಹಾಜಬ್ಬ’ ಎಂದು ಹೆಸರು ದಾಖಲಾಗಿದೆ.
ಎಸ್ಐಆರ್ ಪ್ರಕ್ರಿಯೆ ವೇಳೆ ಮತದಾರರ ಪಟ್ಟಿಯಲ್ಲಿರುವ ಹೆಸರು ಹಾಗೂ ಇತರ ದಾಖಲೆಗಳಲ್ಲಿರುವ ಹೆಸರು ತಾಳೆಯಾಗದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಯಾಗಿದೆ
ಹರೇಕಳ ಹಾಜಬ್ಬ ಅವರಿಗೆ ಇಂದು ಬೆಳಗ್ಗೆ ಅಂಗನವಾಡಿ ಕಾರ್ಯಕರ್ತೆಯ ಮೂಲಕ ನೋಟಿಸ್ ತಲುಪಿಸಲಾಗಿದ್ದು, ಸೆಪ್ಟೆಂಬರ್ 11ರಂದು ಶುಕ್ರವಾರ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯತ್ಗೆ ಹಾಜರಾಗುವಂತೆ ಸೂಚಿಸಲಾಗಿದೆ. ನೋಟಿಸ್ಗೆ ಅನುಗುಣವಾಗಿ ತಾವು ಅಗತ್ಯ ದಾಖಲೆಗಳೊಂದಿಗೆ ಪಂಚಾಯತ್ಗೆ ಹಾಜರಾಗುವುದಾಗಿ ಹಾಜಬ್ಬ ತಿಳಿಸಿದ್ದಾರೆ.

