ಮಂಗಳೂರು: ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಯು.ಟಿ. ಖಾದರ್ ಫರೀದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸನ್ಮಾನ್ಯ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚೆ ನಡೆಯಿದ್ದು, ಸಂತೋಷ್ ಕುಮಾರ್ ಶೆಟ್ಟಿ ಅವರು ತಮ್ಮ ಅಭಿಪ್ರಾಯಗಳು ಹಾಗೂ ಸಲಹೆಗಳನ್ನು ಮಂಡಿಸಿದರು.

