ವಿಟ್ಲ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಬಾಲಕನ ದೂರಿನ ಮೇರೆಗೆ, ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.
ದೂರಿನ ಪ್ರಕಾರ, 2026ರ ಫೆಬ್ರವರಿಯಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಆರೋಪಿಗಳಾದ ಜವಾದ್, ಶಾಹಿದ್, ರಿಯಾಝ್ @ ಅಬ್ದುಲ್ ಗಫೂರ್ ಹಾಗೂ ಇತರ ಮೂವರು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಸೆಪ್ಟೆಂಬರ್ 4 ರಂದು ದೂರು ದಾಖಲಿಸಲಾಗಿದೆ.
ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ185/2026,186/2026,187/2026,188/2026,189/2026 ಹಾಗೂ 190/2026ರವರೆಗೆ ಪ್ರಕರಣಗಳನ್ನು ದಾಖಲಿಸಿ, ಪೋಕ್ಸೋ ಕಾಯ್ದೆ 2012ರ ಕಲಂ 4(2), 5(m), ಹಾಗೂ6, 8ರ ಅಡಿಯಲ್ಲಿ ಪ್ರಕರಣ. ದಾಖಲಾಗಿರುತ್ತದೆ
ಪ್ರಕರಣಗಳ ತನಿಖೆಯ ವೇಳೆ ಆರೋಪಿಗಳಾದ ಜವಾದ್, ಶಾಹಿದ್ ಹಾಗೂ ರಿಯಾಝ್ @ ಅಬ್ದುಲ್ ಗಫೂರ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

