ಬೆಳ್ತಂಗಡಿ : ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳು ಲೋಕಾಯುಕ್ತ ಕೇಂದ್ರ ಕಚೇರಿಗೆ ಬಂದ ಹಿನ್ನೆಲೆ, ಲೋಕಾಯುಕ್ತ ಅಧಿಕಾರಿಗಳ ತಂಡವು ಇಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಒಟ್ಟು ಎಂಟು ಮಂದಿಯ ಲೋಕಾಯುಕ್ತ ಅಧಿಕಾರಿಗಳ ತಂಡ ಗ್ರಾಮ ಪಂಚಾಯತ್ ಕಚೇರಿಗಳಲ್ಲಿನ ವಿವಿಧ ಕಡತಗಳನ್ನು ಪರಿಶೀಲಿಸಿ, ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿದೆ ಎಂದು ತಿಳಿದು ಬಂದಿದೆ.

