ಮಂಗಳೂರು :ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಂಗಳೂರಿನ ಉರ್ವಸ್ಟೋರ್ ಮಾರುಕಟ್ಟೆಯ ನೂತನ ಅಭಿವೃದ್ಧಿ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ನೂತನ ಮಾರುಕಟ್ಟೆಯ ಕಟ್ಟಡ ವಿನ್ಯಾಸ ಹಾಗೂ ಅಗತ್ಯ ಮೂಲಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿ, ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮೂಡಾ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಇದೇ ವೇಳೆ, ಸಾರ್ವಜನಿಕರು ಸುಸಜ್ಜಿತ ಮಾರುಕಟ್ಟೆಯ ಅಗತ್ಯತೆಯನ್ನು ಅಧ್ಯಕ್ಷರ ಗಮನಕ್ಕೆ ತಂದು, ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವಂತೆ ಮನವಿ ಮಾಡಿದರು.

