ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 18/2005, ಕಲಂ 4 ಮತ್ತು 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತನನ್ನು ಪೊಲೀಸರು ನೆಲ್ಯಾಡಿಯಲ್ಲಿ ದಸ್ತಗಿರಿ ಮಾಡಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ದಯಾನಂದ ಪಿಸಿ 453 ಹಾಗೂ ರವಿರಾಜ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

