ಬೆಳ್ತಂಗಡಿ : ಬೆಳ್ತಂಗಡಿ ತಾಲ್ಲೂಕಿನ ಇಳಂತಿಲದಲ್ಲಿ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಆಯೋಜಿಸಲಾದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ‘ಗೋಸಮ್ಮಾನ್ ಅಭಿಯಾನ’ದ ಸಹಿ ಸಂಗ್ರಹ ಅಭಿಯಾನಕ್ಕೆ ಶ್ರೀ ಗಣೇಶನ ಪ್ರಾರ್ಥನೆಯೊಂದಿಗೆ ವಿಧ್ಯುಕ್ತ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಹೊನ್ನಪ್ಪ ಪೋಟ್ಟುಕೆರೆ ಅವರು ಸಹಿ ಸಂಗ್ರಹ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾದ ತಾಲೂಕಿನ ಧಾರ್ಮಿಕ ಹಾಗೂ ಸಾಮಾಜಿಕ ನೇತಾರರಾದ ಕಿರಣ್ ಚಂದ್ರ ಪುಷ್ಪಗಿರಿ ಅವರು ಉಪಸ್ಥಿತರಿದ್ದು ಕಾರ್ಯಕ್ರಮದಲ್ಲಿ ಭಾಗಿಯಾದರು.

ದಕ್ಷಿಣ ಕನ್ನಡ ಜಿಲ್ಲಾ ಗೋಸಮ್ಮಾನ್ ಅಭಿಯಾನ ಸಮಿತಿಯ ಸಹಪ್ರಭಾರಿ ಅಶೋಕ್ ಇಳಂತಿಲ ಅವರು ಉಪಸ್ಥಿತರಿದ್ದು.
ಕಾರ್ಯಕ್ರಮದಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಭಾಗವಹಿಸಿ ಅಭಿಯಾನಕ್ಕೆ ಸಹಿ ಹಾಕುವ ಮೂಲಕ ಗೋಸಂರಕ್ಷಣೆಯ ಮಹತ್ವದ ಈ ಅಭಿಯಾನಕ್ಕೆ ಸಾಥ್ ನೀಡಿದರು.



