ಕುಂಬಳೆ : ಅಘೋಷಿತ ವಿದ್ಯುತ್ ಕಡಿತವನ್ನು ಪ್ರತಿಭಟಿಸಿ ಬಿಜೆಪಿ ಕುಂಬಳೆ ಮಂಡಲ ಸಮಿತಿಯ ನೇತೃತ್ವದಲ್ಲಿ ಕುಂಬಳೆ ಕೆಎಸ್ಇಬಿ (KSEB) ಕಚೇರಿಗೆ ಪಂಜಿನ ಮೆರವಣಿಗೆ ನಡೆಸಲಾಯಿತು. ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಅಶ್ವಿನಿ ಎಂ ಎಲ್ ಮೇಣದಬತ್ತಿ ಬೆಳಗಿಸಿ ಪ್ರತಿಭಟನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಿಜೆಪಿ ರಾಜ್ಯ ಸಮಿತಿ ಸದಸ್ಯ ವಿ.ರವೀಂದ್ರನ್, ಮಂಡಲ ಅಧ್ಯಕ್ಷ ಬಿ.ವಿಕ್ರಮ್ ಪೈ, ಮಂಡಲ ಉಪಾಧ್ಯಕ್ಷ ಸುಧಾಕರ್ ಕಾಮತ್, ಮಂಡಲ ಕೋಶಾಧಿಕಾರಿ ರಾಧಾಕೃಷ್ಣ ರೈ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ, ಏರಿಯಾ ಸಮಿತಿ ಅಧ್ಯಕ್ಷರಾದ ಸುಜಿತ್ ರೈ ಹಾಗೂ ಶಿವಪ್ರಸಾದ್ ರೈ ಮುಂತಾದವರು ನೇತೃತ್ವ ವಹಿಸಿದ್ದರು.


