ಬಂಟ್ವಾಳ: ಪೊಲೀಸ್ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಬಜಾಲ್–ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ಬಂಧಿತ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿದ್ದ ಈತನ ವಿರುದ್ಧ ವಾರಂಟ್ ಜಾರಿಯಾಗಿತ್ತು.
ಸೆ.15ರಂದು ವಿದೇಶದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಇಮಿಗ್ರೇಷನ್ ವಿಭಾಗದ ಸಹಕಾರದೊಂದಿಗೆ ಬಂಟ್ವಾಳ ನಗರ ಪೊಲೀಸರು ಆತನನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಿದ್ದಾರೆ.ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆ.29ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

