ಮಂಗಳೂರು: ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘದ ವತಿಯಿಂದ ಸೆ.20ರಂದು ನಗರದ ಕದ್ರಿ ಪಾರ್ಕ್ ಬಳಿಯ ಶ್ರೀ ಗೋರಕ್ಷನಾಥ ಜ್ಞಾನ ಮಂದಿರದಲ್ಲಿ ಬೆಳಗ್ಗೆ 10 ಗಂಟೆಯಿಂದ ‘ಕುಡ್ಲ ಉದ್ಯೋಗ ಮೇಳ 2026’ ಆಯೋಜಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಯೋಗಿ ವರದರಾಜ್ ತಿಳಿಸಿದರು. ಶುಭ
ಮಂಗಳವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ಕಳೆದ 56 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಜೋಗಿ ಸಮಾಜದ ಏಳಿಗೆ ಹಾಗೂ ಸಂರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. ಮಂಗಳೂರು ಹಾಗೂ ಪರಿಸರದ ಯುವಜನರ ನಿರುದ್ಯೋಗ ಸಮಸ್ಯೆಯನ್ನು ಮನಗಂಡು ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದರು.

ಉದ್ಯೋಗ ಮೇಳವು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿರದೆ ಸರ್ವರಿಗೂ ಮುಕ್ತವಾಗಿದ್ದು, ಆಸಕ್ತರು ಭಾಗವಹಿಸಬಹುದು. ವಿವಿಧ ಕ್ಷೇತ್ರಗಳಲ್ಲಿ ಸುಮಾರು 850 ಉದ್ಯೋಗಾವಕಾಶಗಳು ಲಭ್ಯವಿದ್ದು, 50ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಈಗಾಗಲೇ 750ಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದು, ಇನ್ನಷ್ಟು ಉದ್ಯೋಗದಾತ ಕಂಪೆನಿಗಳು ಮೇಳದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತರು https://forms.gle/YQV1mJLbvvkdXXU3A ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷರಾದ ಕಿರಣ್ ಜೋಗಿ, ಶ್ರೀಮತಿ ಸುನಂದಾ ಸುರೇಶ್, ಹರೀಶ್ ಕುಮಾರ್ ಜೋಗಿ, ಎಲ್.ಯಶವಂತ್ ಕುಮಾರ್ ಉಪಸ್ಥಿತರಿದ್ದರು

