ಮಂಗಳೂರು: ಮಂಗಳೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ನಗರದ ಮೀನುಗಾರಿಕಾ ಧಕ್ಕೆಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳು ಹಾಗೂ ಮೀನುಗಾರಿಕಾ ಚಟುವಟಿಕೆಗಳನ್ನು ಪರಿಶೀಲಿಸಿದರು.



ಮುಖ್ಯಮಂತ್ರಿಯವರ ಭೇಟಿ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.



ಮೀನುಗಾರಿಕಾ ಧಕ್ಕೆಯಲ್ಲಿನ ಮೂಲಸೌಕರ್ಯ, ಮೀನುಗಾರರ ಸಮಸ್ಯೆಗಳು ಹಾಗೂ ಬಂದರು ಪ್ರದೇಶದ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳು ಮಾಹಿತಿ ಪಡೆದುಕೊಂಡರು.




