ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆ ಕಾರ್ಕಳದ ಸಾಣೂರು ಶ್ರೀ ರಾಮಮಂದಿರ ಬಳಿ ಡಿವೈಡರ್ ಕ್ರಾಸ್ನಲ್ಲಿ ನಡೆದಿದೆ.
ಕಾರ್ಕಳದಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್, ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದಲ್ಲಿ ರಮಾನಾಥ ರೈ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಚಾಲಕ ಹಾಗೂ ಅವರ ಆಪ್ತಸಹಾಯಕ ಅವರಿಗೆ ಗಾಯಗಳಾಗಿದ್ದು, ಅವರನ್ನು ಕಾರ್ಕಳದ ಟಿಎಂಎ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

