ಮಂಗಳೂರು :ಕಾರ್ಕಳ ಸಮೀಪದ ಸಾಣೂರಿನಲ್ಲಿ ಸಂಭವಿಸಿದ ಕಾರು–ಬಸ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರನ್ನು ಬಿಜೆಪಿ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಸಂಸದ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಸಚಿವ ಗಣೇಶ್ ಕಾರ್ಣಿಕ್ ಹಾಗೂ ಶಾಸಕ ರಾಜೇಶ್ ನಾಯ್ಕ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಆಸ್ಪತ್ರೆಗೆ ತೆರಳಿ ರಮಾನಾಥ ರೈ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.

ಅಪಘಾತದ ಬಳಿಕ ರಮಾನಾಥ ರೈ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

