ಮಂಗಳೂರು: 2017ರಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರೈಂ ನಂಬರ್ 231/2017ರ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಕಲಂ 324, 326 ಹಾಗೂ 504ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿ ಪಾರ್ಥ ಅಲಿಯಾಸ್ ಪಾರ್ಥಸಾರಥಿಯನ್ನು ಕಾರ್ಕಳ ತಾಲೂಕಿನ ಕುಕ್ಕುಂದೂರು ಜೋಡು ರಸ್ತೆಯ ಕೆಳಗಿನ ಅಂಗಡಿ ಮನೆ ನಿವಾಸಿ ಎಂದು ತಿಳಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಸಿಜೆಎಂ ನ್ಯಾಯಾಲಯವು LPC No.08/2026 ಅಡಿಯಲ್ಲಿ ಆರೋಪಿಯ ವಿರುದ್ಧ ವಾರೆಂಟ್ ಹೊರಡಿಸಿತ್ತು. ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ದಕ್ಷಿಣ ಪೊಲೀಸ್ ಠಾಣೆಯ ASI ಗಣೇಶ್, ಹೆಡ್ ಕಾನ್ಸ್ಟೆಬಲ್ ಮಂಜುನಾಥ್ (HC 836) ಹಾಗೂ ಪೊಲೀಸ್ ಕಾನ್ಸ್ಟೆಬಲ್ ಮಲ್ಲಿಕ್ ಜಾನ್ (PC 2367) ಅವರು ಕದ್ರಿ ಮೈದಾನ ಬಳಿಯಿಂದ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

