ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಸಮೀಪದ ಹಳೀರ ಫ್ಲೈಓವರ್ ಬಳಿ ಆಲ್ಟೋ ಕಾರು ಹಾಗೂ ಟೆಂಪೋ ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ನಫೀಸಾ (55) ಎಂಬವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

