ಮಂಗಳೂರು, ಸೆ.30: ನಗರದಲ್ಲಿ ಮಾದಕ ವಸ್ತು ಮಾರಾಟದ ವಿರುದ್ಧ ಕಾರ್ಯಾಚರಣೆ ನಡೆಸಿದ ಕಾವೂರು ಪೊಲೀಸರು 16 ಗ್ರಾಂ MDMA ವಶಪಡಿಸಿಕೊಂಡು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಸೆ.29ರಂದು ಮರಕಡ ಗ್ರಾಮದ ಬೊಂದೇಲ್ನಿಂದ ಮೂಡುಶೆಡ್ಡೆ ಕಡೆಗೆ ತೆರಳುವ ರಸ್ತೆಯ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಉಳ್ಳಾಲದ ಮೊಹಮ್ಮದ್ ಇರ್ಫಾನ್ ಎ.ಕೆ. (26) ಎಂಬಾತನನ್ನು ಪೊಲೀಸರು ತಪಾಸಣೆ ನಡೆಸಿದಾಗ ಆತನ ಬಳಿ ಸುಮಾರು 16 ಗ್ರಾಂ MDMA ಪತ್ತೆಯಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಅಂದಾಜು ಮೌಲ್ಯ 1.60 ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಆರೋಪಿಯ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ರಾತ್ರಿ ಕಳ್ಳತನ ಮತ್ತು ಗಾಂಜಾ ಸೇವನೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ರಾತ್ರಿ ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿದೆ

