ಸುಳ್ಯ: ನ್ಯಾಯಾಲಯದ ವಿಚಾರಣೆಗೆ ನಿರಂತರವಾಗಿ ಗೈರುಹಾಜರಾಗಿ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
2014ರಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ನಿವಾಸಿ ಅಶ್ರಫ್ ಎಂಬಾತನ ವಿರುದ್ಧ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿತ್ತು. ಬಳಿಕ ಆತ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದನು.
ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಸುಳ್ಯ ಠಾಣೆಯ ಸಿಬ್ಬಂದಿ ಹೆಡ್ ಕಾನ್ಸ್ಟೆಬಲ್ ರಾಜು ನಾಯ್ಕ ಹಾಗೂ ಪೊಲೀಸ್ ಕಾನ್ಸ್ಟೆಬಲ್ ಸಂತೋಷ್ ಅವರು ಅಶ್ರಫ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

