ಸುಳ್ಯ : ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಗ್ಯಾರೇಜ್ನಲ್ಲಿ ನಿಲ್ಲಿಸಲಾಗಿದ್ದ ಬೈಕ್ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಆ.26ರಂದು ರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣದ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂಬವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

