ಬೆಂಗಳೂರು: ಏಷ್ಯನ್ ಗೇಮ್ಸ್ನಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿರುವ ಕ್ರೀಡಾಪಟು ಪೂವಮ್ಮ ಅವರನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಎಚ್ಎಂಟಿ ಭವನದಲ್ಲಿ ಆತ್ಮೀಯವಾಗಿ ಗೌರವಿಸಿದರು.

ಈ ಸಂದರ್ಭದಲ್ಲಿ ಪೂವಮ್ಮ ಅವರ ಪೋಷಕರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಕೇಂದ್ರ ಸಚಿವರು ಪೂವಮ್ಮ ಅವರನ್ನು ಅಭಿನಂದಿಸಿ, ಅವರ ಕ್ರೀಡಾ ಸಾಧನೆಯನ್ನು ಶ್ಲಾಘಿಸಿದರು. ಇದೇ ವೇಳೆ ಪೂವಮ್ಮ ಅವರ ಕುಟುಂಬದ ಸದಸ್ಯರನ್ನೂ ಆತ್ಮೀಯವಾಗಿ ಸತ್ಕರಿಸಿ ಗೌರವಿಸಿದರು.

ಪೂವಮ್ಮ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಕ್ರೀಡಾ ಕ್ಷೇತ್ರದಲ್ಲಿ ಅವರು ಸಾಧಿಸಿರುವ ಯಶಸ್ಸು ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು.


