ಧಾರವಾಡ : ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಇತ್ತೀಚೆಗೆ 70 ವರ್ಷ ಮೇಲ್ಪಟ್ಟ ಹಿರಿಯರಿಗಾಗಿ ನಗರದಲ್ಲಿ ಹಮ್ಮಿಕೊಂಡಿದ್ದ ತೀವ್ರ ನಡಿಗೆ ಸ್ಪರ್ಧೆಯಲ್ಲಿ ಹಾಗೂ ನಿರ್ದಿಷ್ಟ ದೂರದಲ್ಲಿ ನಿಂತು ಬಕೆಟ್ದಲ್ಲಿ ಬಾಲ್ ಹಾಕುವ ಸ್ಪರ್ಧೆಯಲ್ಲಿ ನಿವೃತ್ತ ಶಿಕ್ಷಕಿ ಚೆನ್ನಮ್ಮ ಬೈಲೂರ(ಹೆಡೆ) ದ್ವಿತೀಯ ಸ್ಥಾನ ಪಡೆದುಕೊಂಡರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಹಲವಾರು ಸಂಘ-ಸ0ಸ್ಥೆಗಳ ಜಂಟಿ ಆಶ್ರಯದಲ್ಲಿ ಈ ಕ್ರೀಡಾಸ್ಪರ್ಧೆಗಳನ್ನು ಸಂಘಟಿಸಿತ್ತು. ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸವಿತಾ ಕಾಳೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ ಪಾಟೀಲ ಬಹುಮಾನ ವಿತರಿಸಿದರು.

