ಮಂಗಳೂರು :ಬ್ಯಾಂಕ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು ಉದ್ಯೋಗವನ್ನು ಕೊಡಿಸದೇ, ಹಣವನ್ನು ಹಿಂತಿರುಗಿಸದೇ ವಂಚಿಸಿದ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ ನಂ. 151/2011 ಕಲಂ 420,465,468,471 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿ ಪುತ್ತೂರು ಬಲ್ಯ ನಿವಾಸಿ ಹಿಬ್ಬಾತುಲ್ಲ (52) ಎಂಬಾತನನ್ನು ದಿನಾಂಕ 05/10/2026 ರಂದು ವಿಟ್ಲ ಠಾಣಾ ಸಿಬ್ಬಂದಿಗಳಾದ ಶಿವಾನಂದ ಮಡ್ಡಿ, ಶಿದ್ದಪ್ಪ ಹಾಗೂ ಯಂಕಪ್ಪ ರವರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

