ಮಂಗಳೂರು: ಮತದಾರರ ಪಟ್ಟಿಯಲ್ಲಿ Form-7 ಅರ್ಜಿಯ ದುರ್ಬಳಕೆ ನಡೆಯುತ್ತಿದೆ ಹಾಗೂ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಅವರಿಗೆ ದೂರು ಸಲ್ಲಿಸಲಾಯಿತು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮನವಿ ಸಲ್ಲಿಕೆ ಸಂದರ್ಭದಲ್ಲಿ Form-7 ಅರ್ಜಿಯ ದುರ್ಬಳಕೆಯಿಂದ ತೊಂದರೆಗೊಳಗಾಗಿದ್ದಾರೆ ಎನ್ನಲಾದ ಕೆಲ ಸಂತ್ರಸ್ತರೂ ಉಪಸ್ಥಿತರಿದ್ದರು.
ಮತದಾರರ ಪಟ್ಟಿಯಲ್ಲಿರುವ ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಅನಧಿಕೃತವಾಗಿ ತೆಗೆದುಹಾಕದಂತೆ ಕ್ರಮ ಕೈಗೊಳ್ಳಬೇಕು ಹಾಗೂ Form-7 ಅರ್ಜಿಗಳ ದುರ್ಬಳಕೆ ಕುರಿತು ಪರಿಶೀಲನೆ ನಡೆಸಬೇಕು ಎಂದು SDPI ಮುಖಂಡರು ಮನವಿಯಲ್ಲಿ ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಎಡಿಸಿ ರಾಜು ಅವರು ವಿಷಯವನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

