ಸುಳ್ಯ: ಸುಳ್ಯ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾದ ಘಟನೆ ಮಂಗಳವಾರ ಕರಿಕ್ಕಳ–ನಿಂತಿಕಲ್ ಮಧ್ಯದ ಮುಚ್ಚಿಲ ಎಂಬಲ್ಲಿ ನಡೆದಿದೆ.
ಮುಂದೆ ಸಾಗುತ್ತಿದ್ದ ಕಾರೊಂದು ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಶಾಸಕಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಎದುರಿನ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಇನ್ನೋವಾ ಕಾರಿನ ಮುಂಭಾಗ ಜಖಂಗೊಂಡಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಕಾರಿನ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಅಪಘಾತದ ಬಳಿಕ ಶಾಸಕಿ ಬೇರೊಂದು ಕಾರಿನಲ್ಲಿ ತಮ್ಮ ಮನೆಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

