ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಶಿವಪ್ರಸಾದ್ ಅವರಿಗೆ ಸೇರಿದ ಮನೆ ಹಾಗೂ ಕೊಟ್ಟಿಗೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
2026ರ ಅಕ್ಟೋಬರ್ 5ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ಸಂಖ್ಯೆ 125/2026 ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿತ ಶಿವಪ್ರಸಾದ್ ಅವರು ತಮ್ಮ ಮನೆಯಲ್ಲಿದ್ದ ಜಾನುವಾರುಗಳನ್ನು ಅಗತ್ಯ ದಾಖಲೆಪತ್ರಗಳನ್ನು ಪಡೆಯದೆ ಅಕ್ರಮವಾಗಿ ಮಾರಾಟ ಮಾಡಿರುವುದು ಪ್ರಕರಣದ ಹಿನ್ನೆಲೆಯಾಗಿದೆ.

ಈ ಹಿನ್ನೆಲೆಯಲ್ಲಿ ನಿಯಮಾನುಸಾರ ಕ್ರಮ ಕೈಗೊಂಡ ಪೊಲೀಸರು, ಅಕ್ಟೋಬರ್ 8ರಂದು ಆರೋಪಿತನ ಮನೆ ಹಾಗೂ ಕೊಟ್ಟಿಗೆ ಇರುವ ಪರಿಸರವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

