ಕಾಸರಗೋಡು: ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ‘ಸ್ವಪ್ನ ಭಾರತ’ ವಿಷಯದ ಆಧಾರದ ಮೇಲೆ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪೆನ್ಸಿಲ್ ಡ್ರಾಯಿಂಗ್ ಸ್ಪರ್ಧೆಯನ್ನು ಆಯೋಜಿಸಲಾಯಿತು. ವಿವಿಧ ಸಂಸ್ಥೆಗಳು ಹಾಗೂ ಶಾಲೆಗಳಲ್ಲಿ ನಡೆಸಲಾದ ಚಿತ್ರಕಲಾ ಸ್ಪರ್ಧೆಗಳಲ್ಲಿ ವಿಜೇತರಾದವರನ್ನು ಒಳಗೊಂಡು ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ನಡೆಸಲಾಯಿತು.
ಡಾ.ಶ್ಯಾಮಪ್ರಸಾದ್ ಮುಖರ್ಜಿ ಭವನದಲ್ಲಿ ಆಯೋಜಿಸಲಾಗಿದ್ದ ಈ ಸ್ಪರ್ಧೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ ಉದ್ಘಾಟಿಸಿದರು. ವಿಕಸಿತ ಭಾರತ ಎಂಬ ಕನಸನ್ನು ನನಸು ಮಾಡುವಲ್ಲಿ ಇಂದಿನ ವಿದ್ಯಾರ್ಥಿಗಳಿಗೆ ಹೆಚ್ಚಿನ ಪಾತ್ರವಿದೆ ಎಂದು ಅಶ್ವಿನಿ ಹೇಳಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಸವಿತಾ, ಜಿಲ್ಲಾ ಕಾರ್ಯದರ್ಶಿಗಳಾದ ಪ್ರಮೀಳಾ ಮಜಲ್, ಪುಷ್ಪಾ ಗೋಪಾಲನ್, ಲೋಕೇಶ್ ನೋಂಡ, ಜಿಲ್ಲಾ ಸೆಲ್ ಕೋಆರ್ಡಿನೇಟರ್ ಸುಕುಮಾರ್ ಕುದ್ರೆಪ್ಪಾಡಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ನಾಯಕ್, ಚಿತ್ರಕಲಾವಿದ ನ್ಯಾಷನಲ್ ಅಬ್ದುಲ್ಲಾ ಮಾತನಾಡಿದರು
ಕಾಸರಗೋಡು ಚಿನ್ಮಯ ವಿದ್ಯಾಲಯದ ಶ್ರೀನಂದ್ ಸುಗೀರ್ಥನ್ ಪ್ರಥಮ ಸ್ಥಾನ ಹಾಗೂ ಅನ್ವಿತಾ ಡಿ. ದ್ವಿತೀಯ ಸ್ಥಾನ ಪಡೆದುಕೊಂಡರು. ಚೈತನ್ಯ ವಿದ್ಯಾಲಯದ ಶಿವಾನಿ ವಿ. ಕುಮಾರ್ ತೃತೀಯ ಸ್ಥಾನಕ್ಕೆ ಭಾಜನರಾದರು.
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

