ಮಂಗಳೂರು: ಎಸ್ಐಆರ್ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ರಾಜೀನಾಮೆಗೆ ಒತ್ತಾಯಿಸಿ, 204 ಮಂಗಳೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಭಾಗವಹಿಸಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳವಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಯಾವುದೇ ಅರ್ಹ ನಾಗರಿಕರ ಹೆಸರನ್ನು ಕೈಬಿಡಬಾರದು. ಬಡವರು, ಶೋಷಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಪ್ರತಿಯೊಬ್ಬರ ಮತದಾನದ ಹಕ್ಕು ಸುರಕ್ಷಿತ ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣಾ ಪ್ರಕ್ರಿಯೆಯೇ ಪ್ರಜಾಪ್ರಭುತ್ವದ ಮೇಲಿನ ಜನರ ನಂಬಿಕೆಗೆ ಆಧಾರವಾಗಿದೆ ಎಂದು ಹೇಳಿದರು.

ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗಾಗಿ ಧ್ವನಿ ಎತ್ತಿರುವ ಮಂಗಳೂರು ಯುವ ಕಾಂಗ್ರೆಸ್ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ ಅವರು, ಪ್ರತಿಯೊಬ್ಬ ಅರ್ಹ ಮತದಾರನ ಮತದಾನದ ಹಕ್ಕನ್ನು ರಕ್ಷಿಸುವ ಈ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

204 ಮಂಗಳೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ಹಾಗೂ ಪ್ರಮುಖ ಧರಣಿಯಲ್ಲಿ ಭಾಗವಹಿಸಿದ್ದರು.


