ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ) ವತಿಯಿಂದ ಸೋಮವಾರ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಆಯುಧ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಉಪಸ್ಥಿತಿಯಲ್ಲಿ ಬ್ಯಾಂಕಿನ ವಾಹನಗಳು, ಯಂತ್ರೋಪಕರಣಗಳು ಹಾಗೂ ಕಚೇರಿಯ ಉಪಕರಣಗಳಿಗೆ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನಬಾರ್ಡ್ನ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಸಂಗೀತಾ ಕರ್ತ, ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮೇಘರಾಜ್ ಜೈನ್, ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಳ್ಕೊಟ್ಟು, ಜೈರಾಜ್ ಬಿ. ರೈ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್, ಮಹಾಪ್ರಬಂಧಕ ಸುನಿಲ್ ಕುಮಾರ್ ಹೊಳ್ಳ ಹಾಗೂ ಉದ್ಯಮಿಗಳಾದ ಇನಾಯತ್ ಅಲಿ ಮತ್ತು ಜಯಪ್ರಕಾಶ್ ತುಂಬೆ ಉಪಸ್ಥಿತರಿದ್ದರು.

