ಮಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ರಜೆ ವಿಸ್ತರಿಸಲಾಗಿದೆ. ಜಿಲ್ಲೆಯ 1ರಿಂದ 10ನೇ ತರಗತಿವರೆಗಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅಕ್ಟೋಬರ್ 22ರಂದು ರಜೆ ಘೋಷಿಸಲಾಗಿದೆ.
ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೂ ರಜೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ

