ಸುರತ್ಕಲ್ : ಯಕ್ಷಮಿತ್ರರು ಸುರತ್ಕಲ್ ಇದರ 21 ನೇ ವರ್ಷದ ವಾರ್ಷಿಕೋತ್ಸವ ಸುರತ್ಕಲ್ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಿದ್ದಕಟ್ಟೆ ಚೆನ್ನಪ್ಪ ಶೆಟ್ಟಿ ವೇದಿಕೆಯಲ್ಲಿ ನಡೆಯಿತು.
ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಐ ರಮಾನಂದ ಭಟ್ ಆಶೀರ್ವಚನ ನೀಡಿದರು. ಯಕ್ಷಮಿತ್ರರು ಸಂಘಟನೆಯ ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ವಿನೋದ್ ಆಚಾರ್ಯ ಹೊಸಬೆಟ್ಟು, ಸುರತ್ಕಲ್ ಬಂಟರ ಸಂಘದ ಮಾಜಿ ಅಧ್ಯಕ್ಷ ಸುಧಾಕರ ಎಸ್ ಪೂಂಜ, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಲೀಲಾಧರ ಶೆಟ್ಟಿ ಕಟ್ಲ, ಕಲಾ ಪೋಷಕ ಪ್ರೇಮ್ ಶೆಟ್ಟಿ ಸುರತ್ಕಲ್, ವಾಸುದೇವ ಆಚಾರ್ಯ ಕುಳಾಯಿ ಭಾಗವಹಿಸಿದ್ದರು.
ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ವೆಂಕಟೇಶ್ ಕಲ್ಲುಗುಂಡಿ ಅವರನ್ನು ಸನ್ಮಾನಿಸಲಾಯಿತು. ಯಕ್ಷಗಾನ ಕಲಾವಿದ ಸದಾಶಿವ ಆಳ್ವ ತಲಪಾಡಿ ಅಭಿನಂದನಾ ಭಾಷಣ ಮಾಡಿದರು.
ಯಕ್ಷಮಿತ್ರರು ಸುರತ್ಕಲ್ ಸಂಘಟನೆಯ ಅಧ್ಯಕ್ಷ ರಾಜೇಶ್ ಕುಮಾರ್, ಕಾರ್ಯದರ್ಶಿ ನಾಗರಾಜ್ ಕಡಂಬೋಡಿ, ಕೋಶಾಧಿಕಾರಿ ಜಗದೀಪ್ ಶೆಟ್ಟಿ ಉಪಸ್ಥಿತರಿದ್ದರು. ಮಹೇಶ್ ಮೂರ್ತಿ ಕಾರ್ಯಕ್ರಮ ನಿರ್ವಹಿಸಿದರು.
ಖ್ಯಾತ ಕಲಾವಿದರಿಂದ “ಭೃಗು ಶಾಪ” ಯಕ್ಷಗಾನ ತಾಳಮದ್ದಲೆ ನಡೆಯಿತು.

