ಮಂಗಳೂರು: ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸ್ ಠಾಣೆಯನ್ನು ಸಾರ್ವಜನಿಕರ ಅನುಕೂಲ ಹಾಗೂ ಠಾಣೆಯ ಕಾರ್ಯನಿರ್ವಹಣೆಯ ದೃಷ್ಟಿಯಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಇಲಾಖೆ ತಿಳಿಸಿದೆ.
ಈ ಹಿಂದೆ ಜಪ್ಪಿನಮೊಗೆರು, ರಾಷ್ಟ್ರೀಯ ಹೆದ್ದಾರಿ-66ರ ಸಮೀಪದ ವಾಹನ ಗ್ಯಾರೇಜ್ ಮಾಲಕರ ಸಂಘದ ಬಳಿ ಇರುವ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಠಾಣೆಯು, ಇದೀಗ ಉಳ್ಳಾಲ ತಾಲೂಕಿನ ಕೋಟೆಕಾರ್ ಗ್ರಾಮದ ಸಂಕೋಳಿಗೆಯಲ್ಲಿರುವ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ.
ಠಾಣೆಯು ಡೋರ್ ನಂ. 5-78, ‘ಪುಷ್ಪ ನಿವಾಸ’, ಶ್ರೀ ಕೃಷ್ಣ ಕಲ್ಯಾಣ ಮಂಟಪದ ಎದುರುಗಡೆ, ಸಂಕೋಳಿಗೆ, ಕೋಟೆಕಾರ್ ಗ್ರಾಮ, ಉಳ್ಳಾಲ ತಾಲೂಕು–575023 ವಿಳಾಸದಲ್ಲಿ ಕಾರ್ಯನಿರ್ವಹಿಸುತ್ತಿದೆ.
ಸಾರ್ವಜನಿಕರು ಸಂಚಾರ ದಕ್ಷಿಣ ಪೊಲೀಸ್ ಠಾಣೆಗೆ ಸಂಬಂಧಿಸಿದ ದೂರುಗಳು ಹಾಗೂ ಇತರ ಪೊಲೀಸ್ ಸೇವೆಗಳನ್ನು ಪಡೆಯಲು ಇನ್ನು ಮುಂದೆ ಹೊಸ ವಿಳಾಸವನ್ನು ಸಂಪರ್ಕಿಸುವಂತೆ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪರ್ಕ ವಿವರಗಳು:
ದೂರವಾಣಿ: 0824-2220850
ಮೊಬೈಲ್: 9480805371
ಗೂಗಲ್ ಮ್ಯಾಪ್: https://maps.app.goo.gl/38Mscz54ZL6AHXfJ9

