ಮುಲ್ಕಿ : ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸಬೆಟ್ಟು ಗ್ರಾಮ ಪಂಚಾಯತ್ ಬಳಿ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲನ ನಮ್ಮ ಹಕ್ಕು ನಮಗೆ ನೀಡಿ ಬೃಹತ್ ಹಕ್ಕೊತ್ತಾಯ ಸಭೆಯು ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಹಾಗೂ ಮಂಡಲದ ಅಧ್ಯಕ್ಷರಾದ ದಿನೇಶ್ ಪುತ್ರನ್ ಪ್ರಧಾನ ಕಾರ್ಯದರ್ಶಿಯಾದ ರಂಜಿತ ಮೂಡಬಿದ್ರೆ ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಸುನೀಲ್ ಆಳ್ವ ಮತ್ತು ಈಶ್ವರ್ ಕಟೀಲ್ ಪಕ್ಷದ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

