ಮಂಗಳೂರು: ಮಂಡ್ದ್ ಸೊಭಾಣ್ ವತಿಯಿಂದ ಆಯೋಜಿಸಲಾಗಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನವು ನವೆಂಬರ್ 3ರಂದು (ನಾಳೆ) ಮುಂಜಾನೆ 5 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸುವ ಮಹತ್ವಾಕಾಂಕ್ಷೆಯೊಂದಿಗೆ ಆಯೋಜಿಸಲಾಗಿರುವ ಈ ಬೃಹತ್ ಸಂಗೀತ ಮಹಾಸಮ್ಮೇಳನವನ್ನು ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಲಿದ್ದಾರೆ.

ಮಹಾಸಮ್ಮೇಳನದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರನ್ನು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.

ವಿಶ್ವ ಕೊಂಕಣಿ ಭಾಷೆ, ಸಂಗೀತ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ ಈ ಮಹಾಸಮ್ಮೇಳನ ಆಯೋಜಿಸಲಾಗಿದೆ.

