ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಟೋಲ್ ಗೇಟ್ ನಿಯಮಬಾಹಿರವಾಗಿದ್ದು, ಅದನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ 24 ಗಂಟೆಗಳ ಹಗಲು-ರಾತ್ರಿ ಧರಣಿ ನಡೆಯಿತು.
ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ, ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ಸಮರ್ಥಿಸಿಕೊಳ್ಳಲು ಏನಾದರೂ ಕಾರಣಗಳಿವೆಯೇ ಎಂದು ಪ್ರಶ್ನಿಸಿದರು. ಇಲ್ಲಿ ಟೋಲ್ ಗೇಟ್ ಅಗತ್ಯವಿಲ್ಲ ಎಂಬುದು ನಿಮ್ಮ ಅಂತರಾತ್ಮಕ್ಕೂ ತಿಳಿದಿರಬಹುದು ಎಂದು ಹೇಳುವ ಮೂಲಕ ಟೋಲ್ ವ್ಯವಸ್ಥೆಯ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆದ ಈ ಹೋರಾಟದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೇರಿದಂತೆ ಹಲವರು ಭಾಗವಹಿಸಿದ್ದರು.

