ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವಾಹನಗಳಿಗೆ ವಿಧಿಸಲಾಗುತ್ತಿರುವ ಅವೈಜ್ಞಾನಿಕ ಶುಲ್ಕ ಹಾಗೂ ವಾಹನ ಚಾಲಕರ ಮೇಲಿನ ದಬ್ಬಾಳಿಕೆಯನ್ನು ವಿರೋಧಿಸಿ, ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಟ್ಯಾಕ್ಸಿ ಸಂಘಟನೆಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿವೆ.
ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ (ರಿ.), ಮಂಗಳೂರು ಹಾಗೂ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ (ರಿ.) ನೇತೃತ್ವದಲ್ಲಿ ಉಭಯ ಜಿಲ್ಲೆಗಳ ಸಮಾನ ಮನಸ್ಕ ಟ್ಯಾಕ್ಸಿ ಸಂಘಟನೆಗಳ ಸಹಯೋಗದಲ್ಲಿ ಈ ಧರಣಿ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಮಾತನಾಡಿದ ಮಾಜಿ ಉಡುಪಿ ಶಾಸಕ ರಘುಪತಿ ಭಟ್ ಅವರು, ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವಾಹನಗಳಿಗೆ ವಿಧಿಸಲಾಗುತ್ತಿರುವ ಶುಲ್ಕ ಹಾಗೂ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಘಟನೆಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

