ಉಡುಪಿ: ವಿಶ್ವದಾಖಲೆ ಸಾಧನೆಯ ಹಿನ್ನೆಲೆಯಲ್ಲಿ ವಿದ್ವಾನ್ ಯಶವಂತ್ ಎಂ.ಜಿ. ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಅಭಿನಂದನೆ ಸ್ವೀಕರಿಸಿದರು.
ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಆಹ್ವಾನದ ಮೇರೆಗೆ ವಿಶ್ವದಾಖಲೆಯ ಕಾರ್ಯಕ್ರಮದ ಸಂದರ್ಭದಲ್ಲಿ ಯಶವಂತ್ ಅವರು ಉಡುಪಿಗೆ ಆಗಮಿಸಿದ್ದರು. ಈ ವೇಳೆ ಕೇಂದ್ರ ಸಚಿವರಿಂದ ಸನ್ಮಾನ ಮಾಡಿಸುವುದಾಗಿ ಸಂಸದರು ತಿಳಿಸಿದ್ದರು.

ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಭೇಟಿಯ ಸಂದರ್ಭದಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸ್ಥಳೀಯ ಶಾಸಕರು ಯಶವಂತ್ ಅವರನ್ನು ಅಭಿನಂದಿಸಿದರು. ಈ ವೇಳೆ ಕುಂದಾಪುರ ರೈಲು ಹೋರಾಟ ಸಮಿತಿಯ ಪ್ರಮುಖ ಗೌತಮ್ ಶೆಟ್ಟಿ ಅವರು ಯಶವಂತ್ ಅವರ ವಿಶ್ವದಾಖಲೆಯ ಕಾರ್ಯಕ್ರಮದ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಮಾಹಿತಿ ಆಲಿಸಿದ ಸಚಿವರು ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.
ವಿಶ್ವದಾಖಲೆ ಸಾಧನೆಯ ಬಳಿಕ ಕೇಂದ್ರ ಸಚಿವರನ್ನು ಭೇಟಿಯಾಗಿ ಅಭಿನಂದನೆ ಸ್ವೀಕರಿಸಿರುವುದು ಸಂತಸ ತಂದಿದೆ. ಈ ಅವಕಾಶ ಕಲ್ಪಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ವಿದ್ವಾನ್ ಶ್ರೀ ಯಶವಂತ್ ಎಂ.ಜಿ. ತಿಳಿಸಿದ್ದಾರೆ.

