ಮಂಗಳೂರು: ಆಧುನಿಕ ಮಂಗಳೂರಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮಹಾನ್ ನಾಯಕ, ಆಧುನಿಕ ಪ್ರಾಂತ್ಯದ ಶಿಲ್ಪಿ ದಿವಂಗತ ಉಳ್ಳಾಲ ಶ್ರೀನಿವಾಸ್ ಮಲ್ಯ ಅವರ 125ನೇ ಜನ್ಮದಿನವನ್ನು ನಗರದ ನಂತೂರು ಬಳಿಯ ಪದುವ ಶಾಲೆಯ ಮುಂಭಾಗದಲ್ಲಿರುವ ಶ್ರೀನಿವಾಸ್ ಮಲ್ಯ ಉದ್ಯಾನವನದಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು. ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮದಿನ ಆಚರಣಾ ಸಮಿತಿಯ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಮಲ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು

ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಾಮನಾಥ ರೈ, ಜನ್ಮದಿನ ಆಚರಣಾ ಸಮಿತಿ ಸಂಚಾಲಕಿ ಮಂಜುಳಾ ನಾಯಕ್, ಮಲ್ಯ ಕುಟುಂಬದ ಉಳ್ಳಾಲ ನರಹರಿ ಮಲ್ಯ, ಅರುಂಧತಿ ಮಲ್ಯ, ನಂದನ್ ಮಲ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಪೂಜಾರಿ, ಮೆಸ್ಕಾಂ ನಿಗಮದ ಅಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ಮೂಡಾ ಅಧ್ಯಕ್ಷ ಸಂತೋಷ್ ಶೆಟ್ಟಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಪ್ರವಾಸೋದ್ಯಮ ನಿಗಮದ ಅಧ್ಯಕ್ಷೆ ಶಾಲೆಟ್ ಪಿಂಟೋ ಉಪಸ್ಥಿತರಿದ್ದರು.
ಅಲ್ಲದೆ ಮಾಜಿ ಪಾಲಿಕೆ ಸದಸ್ಯರಾದ ಅಬ್ದುಲ್ ರವೂಫ್, ಶಶಿಧರ್ ಹೆಗ್ಡೆ, ಅನಿಲ್ ಕುಮಾರ್, ನವೀನ್ ಡಿಸೋಜ, ಮದರ್ ತೆರೇಸಾ ವಿಚಾರ ವೇದಿಕೆ ಅಧ್ಯಕ್ಷ ರಾಯ್ ಕ್ಯಾಸ್ಟಲಿನೋ, ಅಕಾಡೆಮಿ ಸದಸ್ಯ ಸಮರ್ಥ ಭಟ್, ಸಮಿತಿ ಅಧ್ಯಕ್ಷ ಟಿ.ಸಿ. ಗಣೇಶ್, ನೀತು ಶರಣ್, ರಾಜೇಶ್ ದೇವಾಡಿಗ, ಯೋಗೀಶ್ ನಾಯಕ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿದರು.

