ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟ ಮುದ್ದುಲಕ್ಷ್ಮೀ ಧಾರಾವಾಹಿ ಖ್ಯಾತಿಯ ಚರಿತ್ ಬಾಳಪ್ಪ ವಿರುದ್ಧ ತನ್ನ ಪರಿಚಯವಿದ್ದ ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಆರ್. ಆರ್. ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಯುವತಿಗೆ ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.
ಯುವತಿ ವಾಸವಾಗಿದ್ದ ಮನೆಗೆ ಸಹಚರರೊಂದಿಗೆ ನುಗ್ಗಿದ ಚರಿತ್ ಯುವತಿಗೆ ಕಿರುಕುಳ ನೀಡಿದ್ದಲ್ಲದೆ ಹಣಕ್ಕೂ ಬೇಡಿಕೆ ಇಟ್ಟಿರುವ ಆರೋಪವು ಇದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಹರಿ ಬಿಡುವ ಬೆದರಿಕೆಯನ್ನು ಹಾಕಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.
ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ, ಕೊಲೆ, ಬೆದರಿಕೆ, ದೌರ್ಜನ್ಯ ಆರೋಪಗಳು ಕೇಳಿ ಬಂದಿದ್ದು ಯುವತಿ ನೀಡಿದ ದೂರಿನ ಅನ್ವಯ ಆರ್. ಆರ್. ನಗರ ಪೊಲೀಸರು ಬಂಧಿಸಿದ್ದಾರೆ. ಅಂದಹಾಗೆ ಚರಿತ್ ಅವರಿಗೆ ಈಗಾಗಲೇ ಮದುವೆಯಾಗಿದ್ದು ವಿಚ್ಚೇದನ ಕೂಡ ಪಡೆದ್ದಾರೆ ಮಾಜಿ ಪತ್ನಿಯ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ ಎಂಬ ಆರೋಪವು ಕೇಳಿ ಬರುತ್ತಿದೆ.