ಮಾತಿನ ಮೂಲಕವೇ ಎಲ್ಲರ ಮನ ಗೆದ್ದಿರುವ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್ ಬರಗೂರು (67) ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಕಳೆದ ಕೆಲವು ವರ್ಷಗಳ ಹಿಂದೆ ಹ್ರದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಯಪ್ರಕಾಶ್ ಬರಗೂರು ಅವರು ಜಯದೇವ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಲ್ಲದೆ ಕೆಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಜಯಪ್ರಕಾಶ್ ಅವರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಾಳೆ ಜಯಪ್ರಕಾಶ್ ಅಂತ್ಯ ಸಂಸ್ಕಾರ ಬನಶಂಕರಿಯ ಚಿತಾಗಾರದಲ್ಲಿ ನಡೆಯಲಿದ್ದು ಕತ್ರಿಗುಪ್ಪೆ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಬಳಿ ಇರುವ ಸುಧಾ ಬರಗೂರು ಅವರ ನಿವಾಸದಲ್ಲಿ ಬೆಳ್ಳಿಗ್ಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.