ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಹಾಗೂ ಅವರ ಕುಟುಂಬದವರಿಗಾಗಿ ನಗದು ರಹಿತ ಆರೋಗ್ಯ ಸೇವೆ ಒದಗಿಸಲಾಗುತ್ತಿದ್ದು, ಈ ಸಂಬಂಧ ಈಗಾಗಲೇ 275 ಖಾಸಗಿ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ನೌಕರರು ತಾವು ಇರುವ ಊರಿನಲ್ಲೇ ಈ ಸೌಲಭ್ಯ ಪಡೆಯಬಹುದಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಆಸ್ಪತ್ರೆಗಳಿಗೆ ಸೌಲಭ್ಯವನ್ನು ವಿಸ್ತರಿಸಲಾಗುವುದು.
ಸಾರಿಗೆ ನೌಕರರಿಗೆ ಸಿಲಿವೆ ಈ ಎಲ್ಲಾ ಸೌಲಭ್ಯಗಳು
1. ಕೆಎಸ್ಆರ್ಟಿಸಿ ನೌಕರರಿಗೆ ಸರ್ಕಾರಿ, ಖಾಸಗಿ ಸೇರಿದಂತೆ 275 ಆಸ್ಪತ್ರೆಗಳಲ್ಲಿ ಆರೋಗ್ಯ ಕಾರ್ಡ್ ಬಳಸಿ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ
2. 34 ಸಾವಿರ ಸಿಬ್ಬಂದಿ, 1.50 ಲಕ್ಷ ಫಲಾನುಭವಿಗಳು
3. ಕಣ್ಣು, ದಂತ ಚಿಕಿತ್ಸಾ ವೆಚ್ಚವೂ ಲಭ್ಯ
4. ನೌಕರರ ಕುಟುಂಬಕ್ಕೂ ಆರೋಗ್ಯ ಕಾರ್ಡ್ ಬಳಸಿ ಚಿಕಿತ್ಸೆ ಸೌಲಭ್ಯ
5. ಪ್ರತಿ ವರ್ಷ ರಾಜ್ಯ ಸರ್ಕಾರದಿಂದ 20 ಕೋಟಿ ರೂ. ಹಣ ಈ ಯೋಜನೆಗೆ ಮೀಸಲು