ಮಂಗಳೂರು: ನಗರದ ಹೊರವಲಯದ ಉದ್ಯಮಿಯೊಬ್ಬರಿಗೆ ಭೂಗತ ಪಾತಕಿ ಕಲಿ ಯೋಗೀಶ್ ಜೀವ ಬೆದರಿಕೆ ಹಾಕಿದ್ದು ಈ ಬಗ್ಗೆ ಬಜ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ.17 ರಂದು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶ್ ಇಂಟರ್ನೆಟ್ ಕಾಲ್ ಮೂಲಕ ಬಜ್ವೆಯಲ್ಲಿ ಕಲ್ಲಿನ ಕೋರೆ ಹಾಗೂ ಇತರ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ರೊನಾಲ್ಡ್ ಎಂಬವರಿಗೆ ಕರೆ ಮಾಡಿ 3 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ.ಒಂದು ವೇಳೆ ಹಣ ನೀಡದಿದ್ದರೆ ಮನೆಯವರನ್ನೆಲ್ಲಾ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿ ರೊನಾಲ್ಡ್ ಅವರು ಬಜ್ವೆ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣವನ್ನು ದಾಖಲಿಸಿ ಕೊಂಡಿರುವ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

