ಬಾಲಿವುಡ್ ಪ್ರಸಿದ್ಧ ಗಾಯಕ ಸೋನು ನಿಗಮ್ ಅವರಿಗೆ ಲೈವ್ ಪರ್ಫಾರ್ಮೆನ್ಸ್ ಸಮಯದಲ್ಲಿ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆ. ನೋವಿನ ಹೊರತಾಗಿಯೂ ಅವರು ಪ್ರದರ್ಶನ ಮುಂದುವರಿಸಿ, ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ತಮ್ಮ ಅನುಭವವನ್ನು ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಅವರ ಬೇಗನೆ ಚೇತರಿಸಿಕೊಳ್ಳುವಂತೆ ಆಶಿಸಿದ್ದಾರೆ

ಸೋನು ನಿಗಮ್ ಭಾರತೀಯ ಚಿತ್ರರಂಗದ ಜನಪ್ರಿಯ ಗಾಯಕರಲ್ಲಿ ಒಬ್ಬರು. ಇಲ್ಲಿಯವರೆಗೆ ಅವರು ಹಿಂದಿಯಲ್ಲಿ ಅನೇಕ ಅದ್ಭುತ ಹಾಡುಗಳ ಮೂಲಕ ಸಂಗೀತ ಪ್ರೇಮಿಗಳನ್ನು ಆಕರ್ಷಿಸಿದ್ದಾರೆ. ಇತ್ತೀಚೆಗೆ ಗಾಯಕ ಅರ್ಜಿತ್ ಸಿಂಗ್ ಪದ್ಮಶ್ರೀ ಪ್ರಶಸ್ತಿ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಟೀಕೆಗೂ ಗುರಿಯಾಗಿದ್ದರು.
ಭಾನುವಾರ ನೇರ ಪ್ರದರ್ಶನದ ವೇಳೆ ಅವರು ತೀವ್ರವಾದ ಬೆನ್ನುನೋವಿನಿಂದ ಬಳಲುತ್ತಿದ್ದರು ಆದರೂ ನೋವಿನ ನಡುವೆ ಪ್ರದರ್ಶನವನ್ನು ಮುಂದುವರೆಸಿದರು. ಸಂಗೀತ ಕಾರ್ಯಕ್ರಮದ ನಂತರ ನೋವು ಉಲ್ಬಣಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ಅವರು ತಮ್ಮ ಆರೋಗ್ಯದ ಬಗ್ಗೆ ಮಾತನಾಡುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ನನ್ನ ಜೀವನದ ಅತ್ಯಂತ ಕಷ್ಟದ ದಿನ. ನಾನು ಹಾಡು ಹೇಳುತ್ತಾ, ವೇದಿಕೆ ಮೇಲೆಲ್ಲ ಓಡಾಡುತ್ತಾ ಇದ್ದೆ. ಆಗ ನೋವು ಕಾಣಿಸಿಕೊಂಡಿತ್ತು. ನನ್ನ ಬೆನ್ನು ಹುರಿಗೆ ಯಾರೋ ಇಂಜೆಕ್ಷನ್ ಸೂಜಿ ಇಟ್ಟಿದ್ದಾರೆ ಅನಿಸುತ್ತಿತ್ತು. ಸ್ವಲ್ಪ ಅಲ್ಲಾಡಿದರೂ ನೋವು ಕಿತ್ತು ಬರುತ್ತಿತ್ತು’ ಆದರೂ ಹೇಗೋ ಮ್ಯಾನೇಜ್ ಮಾಡಿದೆ. ಜನರು ನನ್ನಿಂದ ಎಷ್ಟನ್ನು ನಿರೀಕ್ಷಿಸುತ್ತಾರೋ ಅದಕ್ಕಿಂತ ಕಡಿಮೆ ಕೊಡಲು ನನಗೆ ಇಷ್ಟ ಇಲ್ಲ’ ಎಂದು ಅವರು ಹೇಳಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

