ಮಂಗಳೂರು : ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್ಸ್ಟೇಬಲ್ ಪ್ರವೀಣ್ ನಾಯ್ಕಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ
ಪ್ರಕರಣ ಒಂದರಲ್ಲಿ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದ ಸ್ಕೂಟರನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶವಾಗಿದ್ದರೂ ಬಿಡುಗಡೆ ಮಾಡಬೇಕಿದ್ದರೆ 5 ಸಾವಿರ ರೂ.ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹಮ್ಮದ್ ಶರೀಫ್ ಹಾಗೂ ಸಿಬ್ಬಂದಿ ಪ್ರವೀಣ್ ನಾಯ್ಕ ಮೂರು ಸಾವಿರ ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಜ.27ರಂದು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು.ಅದರಂತೆ ಆರೋಪಿಗಳಿಬ್ಬರು ನ್ಯಾಯಾಂಗ ಬಂಧನದಲ್ಲಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಅವರು ಆರೋಪಿಗಳಿಬ್ಬರಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ಆರೋಪಿಗಳ ಪರವಾಗಿ ನ್ಯಾಯವಾದಿ ಅರುಣ್ ಬಂಗೇರ ಹಾಗೂ ರಿಹಾನಾ ಪರ್ವಿನ್ ವಾದ ಮಂಡಿಸಿದ್ದರು.

